Friday, May 15, 2026

ಕೊಡವೂರು ಮಹಾರುದ್ರಯಾಗ: ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ

Must read

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿರುವ ಮಹಾರುದ್ರಯಾಗ ಅಂಗವಾಗಿ ಮೇ 15ರಂದು ಸಂಜೆ 6 ಗಂಟೆಗೆ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ವನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಲಿದ್ದಾರೆ.
ಮಹಾ ರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್ ಕಾಂಚನ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಶ್ರೀ ಮಹರ್ಷಿ ಆನಂದ ಗುರೂಜಿ ಆಶೀರ್ವಚನ ನೀಡುವರು.
ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಮಾಜಿ ಸಚಿವ ವಿನಯ ಕುಮಾ‌ರ್ ಸೊರಕೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಐಎನ್‌ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಅಶೋಕ್ ಶೆಟ್ಟಿ ಮೈರ್ಮಾಡಿ, ಅಮೃತಾ ಕೃಷ್ಣಮೂರ್ತಿ ಆಚಾರ್ಯ, ಕೆ. ನಾರಾಯಣ ಬಲ್ಲಾಳ್, ಪದ್ಮನಾಭ ಬಂಗೇರ, ಚಂದ್ರಶೇಖರ್ ಟಿ., ಶಶಿಧರ ಎಂ. ಅಮೀನ್, ರಮೇಶ್ ಮಾಸ್ತರ್ ಕಲ್ಮಾಡಿ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಸುರೇಂದ್ರ ಉಪಾಧ್ಯ, ಗುರುರಾಜ್ ರಾವ್, ಯಾದವ ಅಮೀನ್, ಜ್ಞಾನೇಶ್ವರ ಕೋಟ್ಯಾನ್, ನರೇಂದ್ರ ಎಂ., ದಾಮೋದರ ಬಂಗೇರ, ಸತೀಶ್ ಬಂಗೇರ, ನವೀನ್ ಕುಂದರ್, ಸುರೇಶ್ ಅಮೀನ್ ಮುಖ್ಯ ಅತಿಥಿಗಳಾಗಿದ್ದಾರೆ.

ಬೆಳಿಗ್ಗೆಯಿಂದ ಋತ್ವಿಜರ ಸ್ವಾಗತ, ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಅರಣಿಮಥನ, ಅಗ್ನಿ ಜನನ, ಬ್ರಹ್ಮಕೂರ್ಚ ಹೋಮ, ಕಂಕಣ ಬಂಧ, ದ್ವಾದಶ ನಾರಿಕೇಳ ಗಣಯಾಗ, ರುದ್ರ ಜಪ ನೆರವೇರಲಿದೆ.

ಭಕ್ತಿ ಸಂಗೀತ
ಮಧ್ಯಾಹ್ನ 12.30: ಅನ್ನ ಸಂತರ್ಪಣೆ, ಮಧ್ಯಾಹ್ನ 12: ರಮ್ಯಾ ಬೆಳ್ತಂಗಡಿ ಮತ್ತು ತಂಡದಿಂದ ಭಕ್ತಿ ಸಂಗೀತ, ಮಧ್ಯಾಹ್ನ 2.30ರಿಂದ ರುದ್ರ ಜಪ, ಸಂಜೆ 4.30ರಿಂದ ವಾಸ್ತು ಹೋಮ, ವಾಸ್ತು ಪೂಜೆ, ರಾಕ್ಟೋಘ್ನ ಹೋಮ ನೆರವೇರಲಿದೆ.

ನೃತ್ಯ ಸಿಂಚನ
ರಾತ್ರಿ 8: ತೊಟ್ಟಂನ ಶಬರಿ ಮತ್ತು ತಂಡ ಹಾಗೂ ತೆಂಕನಿಡಿಯೂರು ಶ್ರೀಸಾಯಿ ನಾಟ್ಯಾಲಯದಿಂದ ನೃತ್ಯ ಕಾರ್ಯಕ್ರಮ, ರಾತ್ರಿ 8.30: ಲಕ್ಷ್ಮೀ ಗುರುರಾಜ್‌ಎನ್.ಎನ್.ಯು. ವತಿಯಿಂದ ನೃತ್ಯ ಸಿಂಚನ ನಡೆಯಲಿದೆ.

spot_img

More articles

LEAVE A REPLY

Please enter your comment!
Please enter your name here