Home Uncategorized ಉಡುಪಿ: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ತಾಲೂಕಿನ ಕೆಮ್ಮಣ್ಣು ನೇಜಾರಿನಲ್ಲಿ ನಡೆದಿದೆ.
ನೇಜಾರು ನಿವಾಸಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21), ಅಸೀಮ್(14) ಕೊಲೆಯಾದವರು. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Exit mobile version