Monday, May 18, 2026

ಕೊಲ್ಲೂರು: ಜೀಪು- ಟೆಂಪೋ ಮಧ್ಯೆ ಭೀಕರ ಅಪಘಾತ: ಇಬ್ಬರು ಮೃತ್ಯು, ಎಂಟು ಮಂದಿಗೆ ಗಾಯ

Must read

ಉಡುಪಿ: ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ನಡುವೆ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಜ್ಯೋತಿ (34) ಹಾಗೂ ಆರ್ಯ ಅನೂಪ್ (26) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡವರನ್ನು ಆಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಬೆ (37), ಅನೂಪ್ (37), ಜ್ಯೋತಿ (43) ಹಾಗೂ ಜೀಪ್ ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಡಚಾದ್ರಿಯಿಂದ ಕೊಲ್ಲೂರಿನತ್ತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಕೊಲ್ಲೂರು ಕಡೆಯಿಂದ ನಾಗೋಡಿ ಕಡೆಗೆ ಸಾಗುತ್ತಿದ್ದ ಟೆಂಪೋ ನಡುವೆ ಈ ಅಪಘಾತ ಸಂಭವಿಸಿದೆ. ಮೃತರು ಹಾಗೂ ಗಾಯಾಳುಗಳು ಕೇರಳ ಮೂಲದವರು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಕೊಲ್ಲೂರು ಠಾಣೆಯ ಪಿಎಸ್‌ಐಗಳಾದ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಭೀಮಾಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

spot_img

More articles

LEAVE A REPLY

Please enter your comment!
Please enter your name here