Thursday, May 21, 2026

ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿ.ಐ.ಟಿ.ಎನ್.ಡಿ.ಪಿ.ಎಸ್. ಕಾಯ್ದೆಯಡಿ ಆರೋಪಿಯ ಬಂಧನ

Must read

ಉಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್‌ ರೌಫ್‌ (26) ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಸೋಮವಾರ ಬಂಧಿಸಲಾಗಿದೆ.
ಈತನ ವಿರುದ್ಧ ದಾಖಲಾಗಿರುವ ವಿವಿಧ ಮಾದಕ ದ್ರವ್ಯ ಪ್ರಕರಣಗಳ ಹಿನ್ನೆಲೆ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಮೇ 18ರಂದು ಬಂಧನ ಆದೇಶ ಹೊರಡಿಸಿದ್ದರು. ಅದರಂತೆ ಮೇ 19ರಂದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಅಬ್ದುಲ್‌ ರೌಫ್‌ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆ, ಉಡುಪಿ ನಗರ ಪೊಲೀಸ್ ಠಾಣೆ ಹಾಗೂ ಸೋಲದೇವನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ತಲಾ ಒಂದು ಪ್ರಕರಣ ದಾಖಲಾಗಿವೆ. ಅಲ್ಲದೆ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಬಂಧಿತ ಆರೋಪಿಯನ್ನು ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಆದೇಶಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here