ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಮೂಲಗಳ ಪ್ರಕಾರ, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ನಡುವೆ ನಡೆದ ಸುದೀರ್ಘ ಸಭೆಯಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಗಳು ಮತ್ತು ಮುಂದಿನ ನಾಯಕತ್ವದ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸುವ ಕುರಿತು ಪ್ರಸ್ತಾಪ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಲ್ಲಿ, ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡುವ ಕುರಿತು ಕೂಡ ಚರ್ಚೆ ನಡೆದಿದೆ ಎನ್ನಲಾಗಿದೆ.
ಸಿಎಂ ಸ್ಥಾನಕ್ಕೆ ನಾಳೆ ಸಿದ್ದರಾಮಯ್ಯ ರಾಜೀನಾಮೆ.?

