Tuesday, September 1, 2026

ಸಿಎಂ ಸಿದ್ದು ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Must read

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಗೂ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಲಾಗಿದ್ದ ಹೈ-ವೋಲ್ವೇಜ್ ಉಪಹಾರ ಕೂಟದ ರಾಜಕೀಯ ಬೆಳವಣಿಗೆಗಳು ಇಡೀ ರಾಜ್ಯದ ಗಮನ ಸೆಳೆದಿವೆ.
ದೆಹಲಿಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನಡೆದ ಸುದೀರ್ಘ ಸಭೆಯ ಬಳಿಕ, ಹೈಕಮಾಂಡ್ ನೀಡಿದ 2.5 ವರ್ಷದ ಅಧಿಕಾರ ಹಂಚಿಕೆ ಸೂತ್ರಕ್ಕೆ ಸಿಎಂ ಸಿದ್ದರಾಮಯ್ಯ ತಲೆಬಾಗಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಮಾತಿಗೆ ಗೌರವ ನೀಡಿ ಸಿಎಂ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂಬ ದಟ್ಟ ವದಂತಿಗಳ ನಡುವೆಯೇ ಈ ಮಹತ್ವದ ಸಭೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕುರಿತಾಗಿ ಕರೆದಿದ್ದ ಬ್ರೇಕ್‌ಫಾಸ್ಟ್ ಸಭೆ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಉಪಹಾರ ಸಭೆಗೆ ಬಂದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಆಪ್ತತೆಯಿಂದ ಆಲಿಂಗನ ಮಾಡಿದರು. ಇದು ರಾಜ್ಯದ ಮುಖ್ಯಮಂತ್ರಿ ಪದವಿಯ ಹಸ್ತಾಂತರದ ಅಧಿಕೃತ ಸೂಚನೆಯಂತಿತ್ತು.
ಪತ್ನಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ಮುಂಬೈಗೆ ತೆರಳಿದ್ದಾರೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯನವರು ಮಧ್ಯಾಹ್ನ ಮೂರು ಗಂಟೆಯ ಬಳಿಕ ರಾಜ್ಯಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಎನ್ನಲಾಗಿದೆ.

spot_img

More articles

LEAVE A REPLY

Please enter your comment!
Please enter your name here