Sunday, May 31, 2026

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

Must read

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಾದ ಎಸ್ ಐಆರ್ ಪ್ರಕ್ರಿಯೆ, ನೀಟ್ ಹಗರಣ ಹಾಗೂ ಬೆಲೆ ಏರಿಕೆ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಭವನದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬ್ರಹ್ಮಗಿರಿ ಸರ್ಕಲ್ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕ ತನಕ ಸಾಗಿ ಬಂತು. ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ‌ ಜೋಡುಕಟ್ಟೆಯ ಬಳಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ,ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಮಂಡಳಿಯ ಎಂ.ಎ ಗಫೂರ್, ಮುಖಂಡರಾದ ಉದಯಕುಮಾರ್ ಶೆಟ್ಟಿ ಮುನಿಯಾಲು,ಪ್ರಸಾದ್ ರಾಜ್ ಕಾಂಚನ್, ಮಂಜುನಾಥ ಪೂಜಾರಿ ಹೆಬ್ರಿ, ಹರಿಪ್ರಸಾದ್ ರೈ, ,ರಮೇಶ್ ಕಾಚನ್ ,ಹರೀಶ್ ಕಿಣಿ , ಕಿಶನ್ ಹೆಗ್ಡೆ , ಸೌರಭ್ ಬಲ್ಲಾಳ್ ,ಪ್ರಖ್ಯಾತ್ ಶೆಟ್ಟಿ ,ಜ್ಯೋತಿ ಹೆಬ್ಬಾರ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

spot_img

More articles

LEAVE A REPLY

Please enter your comment!
Please enter your name here