Friday, June 5, 2026

ಖಾತೆ ಹಂಚಿಕೆ ಬಗ್ಗೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

Must read

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, “ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆ ಕಾರಣದಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಶಾಸಕ ಹಾಗೂ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ತಿಳಿಸಿದ್ದಾರೆ.
ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕಾಗಿ ಪಕ್ಷದ ನಾಯಕತ್ವಕ್ಕೆ ಧನ್ಯವಾದಗಳು. ಆದರೆ ನಾನು ಸಚಿವನಾಗಿ ಕಾರ್ಯನಿರ್ವಹಿಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

spot_img

More articles

LEAVE A REPLY

Please enter your comment!
Please enter your name here