ಉಡುಪಿ: ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಶಾಲೆಗಳು, ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಿಕ್ಷಣ ಸಂಸ್ಥೆಗಳು, ವೃತ್ತಿಪರ ಕಾಲೇಜುಗಳು, ಕೇಂದ್ರ ಸರ್ಕಾರದ ಶಿಕ್ಷಣ ಸಂಸ್ಥೆಗಳು, ಮದರಸಾಗಳು, ಅಂಗನವಾಡಿ ಕೇಂದ್ರಗಳು ಹಾಗೂ ಟ್ಯೂಷನ್ ತರಗತಿಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ವಸತಿ ಶಾಲೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಅಲ್ಲದೇ ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಪರೀಕ್ಷೆಗಳು, ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಂದರ್ಶನಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದ್ದು, ಅವುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ರೆಡ್ ಅಲರ್ಟ್ ಘೋಷಣೆ: ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ
More articles

