ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ವಾಪಸ್ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ.
ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದು, ಸಚಿವ ಸಂಪುಟದಲ್ಲಿ ಮುಂದುವರಿದು ಕಾರ್ಯನಿರ್ವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

