Saturday, August 29, 2026

ವಯಸ್ಸಿನ ಚಂಚಲತೆಗೆ ಒಳಗಾಗಿ ಬದುಕು ಹಾಳು ಮಾಡಿಕೊಳ್ಳಬೇಡಿ: ಪುರುಷೋತ್ತಮ್

Must read

ಉಡುಪಿ: ಹದಿಹರೆಯದ ವಿದ್ಯಾರ್ಥಿಗಳು ವಯಸ್ಸಿನ ಚಂಚಲತೆಗೆ ಒಳಗಾಗಿ ದುಶ್ಚಟಗಳತ್ತ ಸಾಗದೆ, ಕಾನೂನಿನ ಅರಿವು ಬೆಳೆಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಪುರುಷೋತ್ತಮ್ ಹೇಳಿದರು.
ಕಾಪು ದಂಡತೀರ್ಥ ಪಿಯು ಕಾಲೇಜಿನಲ್ಲಿ ಮಂಗಳವಾರ ನಡೆದ ಪೋಕ್ಸ್‌ (POCSO) ಕಾಯ್ದೆ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
’18ರಿಂದ 20 ವರ್ಷದ ಅವಧಿ ಅತ್ಯಂತ ಸೂಕ್ಷ್ಮ ಹಂತವಾಗಿದೆ. ಈ ವಯಸ್ಸಿನಲ್ಲಿ ತೆಗೆದುಕೊಳ್ಳುವ ತಪ್ಪು ನಿರ್ಧಾರಗಳು ಭವಿಷ್ಯದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಕಾನೂನುಗಳ ಬಗ್ಗೆ ಅರಿವು ಹೊಂದಿ ಜವಾಬ್ದಾರಿಯುತವಾಗಿ ವರ್ತಿಸಬೇಕು’ ಎಂದರು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕ ಅಥವಾ ಬಾಲಕಿಯೊಂದಿಗೆ ಯಾವುದೇ ರೀತಿಯ ಅಸಭ್ಯ ವರ್ತನೆ ನಡೆಸಿದರೆ ಪೋಕ್ಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಬಹುದು. ಪ್ರೀತಿಯ ಸಂಬಂಧದ ಸಂದರ್ಭದಲ್ಲಿಯೂ ಬಾಲಕಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆ ಇದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಆಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಅಪರಾಧದ ಬಗ್ಗೆ ಮಾಹಿತಿ ಇದ್ದರೂ ಸಂಬಂಧಿಸಿದ ಇಲಾಖೆಗೆ ತಿಳಿಸದೇ ಇರುವುದು ಹಾಗೂ ಸುಳ್ಳು ದೂರು ನೀಡುವುದು ಕೂಡ ಶಿಕ್ಷಾರ್ಹ ಕೃತ್ಯಗಳಾಗಿವೆ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾಯ್ದೆಯ ಬಗ್ಗೆ ಸಮಗ್ರ ಮಾಹಿತಿ ಪಡೆದು ಇತರರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ದೈನಂದಿನ ಜೀವನದಲ್ಲಿ ಕಾನೂನುಗಳ ಅರಿವು ಅಗತ್ಯವಾಗಿದೆ. ‘ಕಾನೂನು ಗೊತ್ತಿರಲಿಲ್ಲ’ ಎಂಬ ಕಾರಣವನ್ನು ಒಪ್ಪಲಾಗುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕನಿಷ್ಠ ಮಟ್ಟದಲ್ಲಾದರೂ ಕಾನೂನು ಜ್ಞಾನ ಹೊಂದಿರಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಡಾ. ಕೆ. ಪ್ರಶಾಂತ್ ಶೆಟ್ಟಿ ಮಾತನಾಡಿ, ಹದಿಹರೆಯದಲ್ಲೇ ಕಾನೂನು ಜಾಗೃತಿ ದೊರೆತರೆ ವಿದ್ಯಾರ್ಥಿಗಳು ಅಪರಾಧಮುಕ್ತ ಹಾಗೂ ಜವಾಬ್ದಾರಿಯುತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪತ್ರಕರ್ತ ರಕ್ಷಿತ್ ಬೆಳಪು, ಪ್ರಾಥಮಿಕ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಮಸ್ಕರೇನ್ಹಸ್ ಉಪಸ್ಥಿತರಿದ್ದರು. ಪ್ರಾಂಶುಪಾಲ ನೀಲಾನಂದ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಶಿವಣ್ಣ ಬಾಯ‌ರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

spot_img

More articles

LEAVE A REPLY

Please enter your comment!
Please enter your name here