Saturday, June 13, 2026

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ–ಎನ್‌ಡಿಪಿಎಸ್‌ ಕಾಯ್ದೆಯಡಿ ಆರೋಪಿಯ ಬಂಧನ

Must read

ಉಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿಐಟಿ–ಎನ್‌ಡಿಪಿಎಸ್‌ (PIT-NDPS) ಕಾಯ್ದೆಯಡಿ ಬಂಧಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದಲ್ಲಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಜೂನ್ 12ರಂದು ಆರೋಪಿಯನ್ನು ಬಂಧಿಸಲಾಗಿದೆ.
ಜಗದೀಶ ಪೂಜಾರಿ ವಿರುದ್ಧ ಮಣಿಪಾಲ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳು ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳು ದಾಖಲಾಗಿವೆ. ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಒಂದು ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಉಳಿದ ಎರಡು ಪ್ರಕರಣಗಳು ತನಿಖೆಯ ಹಂತದಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here