Thursday, June 25, 2026

ಉದ್ಯಾವರ ಸೇತುವೆಯಿಂದ ಜಿಗಿದು ಯುವಕ ಆತ್ಮಹತ್ಯೆ

Must read

ಉಡುಪಿ: ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.

ಮೃತ ಯುವಕನನ್ನು ಉದ್ಯಾವರ ಪಿತ್ರೋಡಿ ನಿವಾಸಿ ರಮೇಶ್ ಮತ್ತು ಪ್ರಮೋದಿನಿ ಶೆಟ್ಟಿಯವರ ಪುತ್ರ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.

ಮೃತ ಹರ್ಷಿತ್ ಮಂಗಳವಾರ ಬೆಳಿಗ್ಗಿ 5 ಗಂಟೆಗೆ ಬೋಳಾರುಗುಡ್ಡೆ ಮೈದಾನದಲ್ಲಿ ಕ್ರಿಕೆಟ್ ಆಡಲು ತೆರಳುವುದಾಗಿ ಹೇಳಿದ್ದು ಬಳಿಕ ಮನೆಗೆ ವಾಪಾಸಾಗಿರಲಿಲ್ಲ. ಆತನ ಮೊಬೈಲ್ ಸ್ವಿಚ್ಚ್ ಆಫ್ ಆಗಿದ್ದು ದ್ವಿಚಕ್ರ ವಾಹನ ಸೇತುವೆಯ ಮೇಲೆ ಪತ್ತೆಯಾಗಿತ್ತು.

ಇದರಿಂದ ಗಾಬರಿಗೊಂಡ ಸ್ಥಳೀಯರು ಹಾಗೂ ಮುಳುಗುತಜ್ಞ ಈಶ್ವರ ಮಲ್ಪೆ ನದಿಯಲ್ಲಿ ಹುಡುಕಾಟ ನಡೆಸಿದ್ದು ಸಂಜೆಯ ವೇಳೆಗೆ ಹರ್ಷಿತ್ ಮೃತದೇಹ ಪತ್ತೆಯಾಗಿದೆ.

ಮೃತ ಹರ್ಷಿತ್ ಮಲ್ಪೆಯ ಸೊಸೈಟಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here