Thursday, June 25, 2026

ಸಹಕಾರಿ ಸಂಘಗಳ ವ್ಯವಹಾರದಲ್ಲಿ ಎದುರಾಗುವ ಸಮಸ್ಯೆ ಪರಿಹಾರಕ್ಕೆ ತರಬೇತಿ ಅಗತ್ಯ- ಜಯಕರ ಶೆಟ್ಟಿ ಇಂದ್ರಾಳಿ

Must read

ಉಡುಪಿ: ಸಹಕಾರಿ ಸಂಘಗಳ ವ್ಯವಹಾರದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ತರಬೇತಿ ಅಗತ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಜಿಲ್ಲೆಯಲ್ಲಿ ಎಲ್ಲಾ ವಗದ ಸಹಕಾರಿಗಳಿಗೆ ನಿರಂತರ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಬುಧವಾರ ಜಿಲ್ಲೆಯ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ವಿಶೇಷ ಸಹಕಾರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಹಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ತರಬೇತಿ ಸಹಕಾರಿಯಾಗಿದೆ. ಸಹಕಾರ ಕ್ಷೇತ್ರದಲ್ಲಿ ನಿರಂತರ ಬದಲಾವಣೆ ನಡೆಯುತ್ತಿದೆ. ಆರ್ಥಿಕ ವ್ಯವಹಾರದ ಜೊತೆಗೆ ಜನರಿಗೆ ಉಪಯುಕ್ತ ಸೇವೆಗಳನ್ನು ನೀಡಬಹುದು. ಇದರ ಆದಾಯದಿಂದಲೇ ಸಹಕಾರಿ ಸಂಸ್ಥೆ ಮುನ್ನಡೆಯುತ್ತದೆ ಎಂದರು.
ಸಹಕಾರ ಯೂನಿಯನ್‌ ನಿರ್ದೇಶಕರಾದ ಗಂಗಾಧರ ಶೆಟ್ಟಿ, ಹರೀಶ್‌ ಕಿಣಿ ಅಲೆವೂರು, ಸುಧೀರ್‌ ವೈ., ಹಿರಿಯ ಉಪನ್ಯಾಸಕಿ ಬಿಂದು ನಾಯರ್‌ ಉಪಸ್ಥಿತರಿದ್ದರು. ಸಿಇಒ ಅನುಷಾ ಕೋಟ್ಯಾನ್‌ ಕಾರ್ಯಕ್ರಮ ನಿರೂಪಿಸಿದರು.

spot_img

More articles

LEAVE A REPLY

Please enter your comment!
Please enter your name here