ಉಡುಪಿ: ಹಿರೇಬೆಟ್ಟು ಭಟ್ರಕೋಡಿಯಲ್ಲಿರುವ ಗ್ರಾಮದೇವರಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ನಿರ್ಮಾಣಗೊಳ್ಳಲಿರುವ ಶಿಲಾಮಯ ಗರ್ಭಗೃಹಕ್ಕೆ ಬಳಸುವ ನೂತನ ಶಿಲೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಶಿಲಾನ್ಯಾಸ ನೆರವೇರಿಸಲಾಯಿತು.
ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ. ಪುರುಷೋತ್ತಮ್ ಅವರು ಶಿಲೆಗಳಿಗೆ ಪ್ರಥಮ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ದೇವಸ್ಥಾನದ ತಂತ್ರಿಗಳಾದ ವಿದ್ವಾನ್ ಡಾ. ಸತ್ಯಕೃಷ್ಣ ಭಟ್ ಅವರ ನೇತೃತ್ವದಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳಲ್ಲಿ ಶಿಲೆಗಳಿಗೆ ಅರಿಶಿನ, ಕುಂಕುಮ, ಹಾಲು ಹಾಗೂ ಹೂವುಗಳನ್ನು ಸಮರ್ಪಿಸಲಾಯಿತು. ಬಳಿಕ ನ್ಯಾಯಾಧೀಶರು ಆರತಿ ಬೆಳಗುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಶುಭಾರಂಭ ಮಾಡಿದರು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀನಿಧಿ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ನಾಯಕ್, ಸೀತಾರಾಮ್ ಭಟ್, ಜಯಪ್ರಕಾಶ್ ನಾಯಕ್, ಶಂಕರ ನಾಯಕ್, ಚಂದ್ರಶೇಖರ ನಾಯಕ್, ಸುಂದರ ಮೂಲ್ಯ, ನಾರಾಯಣ ಪೂಜಾರಿ, ಚಂದ್ರಯ್ಯ ಆಚಾರ್ಯ, ಪುರಂದರ ಆಚಾರ್ಯ, ರಮೇಶ್ ನಾಯಕ್, ಗುರುನಂದನ್ ನಾಯಕ್, ಗುರುದಾಸ್ ಭಂಡಾರಿ, ಸುಧೀರ್ ಶೆಟ್ಟಿ, ಶ್ಯಾಮ್ ನಾಯ್ಕ್, ಸುರೇಶ್ ನಾಯ್ಕ್, ಶೈಲೇಶ್ ಪೂಜಾರಿ, ಗುರುರಾಜ್ ಆಚಾರ್ಯ, ಶಶೀಂದ್ರ ಪೂಜಾರಿ, ದಿನೇಶ್ ಪ್ರಭು, ಡಾ.ಕೃಷ್ಣ ಮೂರ್ತಿ, ಕೇಶವ್ ಭಂಡಾರಿ, ಗೋಪಾಲ್ ನಾಯಕ್, ಕೇಶವ್ ನಾಯಕ್, ನಂದಕುಮಾರ್, ಮಹದೇವ್ ಭಟ್, ಮುರುಳೀಧರ್ ಲಾಗ್ವಂಕರ್, ವಸಂತ್ ನಾಯಕ್, ಸುರೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

