Monday, August 17, 2026

ಅಯೋಧ್ಯೆ ರಾಮ ಮಂದಿರ ದೇಣಿಗೆ ದುರುಪಯೋಗ ಪ್ರಕರಣ: 8 ಮಂದಿ ಬಂಧನ

Must read

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಗ್ರಹಿಸಲಾದ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಎಂಟು ಮಂದಿಯನ್ನು ಬಂಧಿಸಿದೆ ಎಂದು ವರದಿಯಾಗಿದೆ.
ಬಂಧಿತರಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಸೇರಿದ್ದಾರೆ ಎನ್ನಲಾಗಿದೆ. ಉಳಿದಂತೆ ಅನುಕಲ್ಸ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ, ಲವ್ ಕುಶ್ ಮಿಶ್ರಾ, ರಾಮಶಂಕರ್ ಮಿಶ್ರಾ ಹಾಗೂ ಸುಭಾಷ್ ಶ್ರೀವಾಸ್ತವ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶ ಸರ್ಕಾರದ ನಿರ್ದೇಶನದ ಮೇರೆಗೆ ಎಸ್‌ಐಟಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ತನಿಖೆಯ ಪ್ರಗತಿಗೆ ಅನುಗುಣವಾಗಿ ಇನ್ನಷ್ಟು ಬಂಧನಗಳು ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್, ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ:

ಇದೇ ವೇಳೆ, ಪ್ರಕರಣದ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ಅವರು ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಆದರೆ, ಈವರೆಗೆ ಚಂಪತ್ ರಾಯ್ ಅಥವಾ ಅನಿಲ್ ಮಿಶ್ರಾ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸಿದೆ.

spot_img

More articles

LEAVE A REPLY

Please enter your comment!
Please enter your name here