Friday, October 18, 2024

ಖ್ಯಾತ ಹಿರಿಯ ನಟಿ ಲೀಲಾವತಿ ನಿಧನ

Must read

ಬೆಂಗಳೂರು: ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟಿ ಲೀಲಾವತಿ (86) ಅವರು ವಯೋ ಸಹಜ ಅನಾರೋಗ್ಯದಿಂದ ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಕಳೆದ ಕೆಲವು ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಲೀಲಾವತಿ ಅವರು, 1953ರಲ್ಲಿ ‘ಚಂಚಲ ಕುಮಾರಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಒಟ್ಟು 600 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.


ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್​’ ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದು ಕನ್ನಡದ ಕಂದ ಚಿತ್ರಕ್ಕೆ ಫಿಲ್ಮ್ ಫೇರ್​ ಪ್ರಶಸ್ತಿ ಕೂಡ ಸಿಕ್ಕಿತ್ತು. ಜೀವಮಾನ ಸಾಧನೆಗಾಗಿ 1999ರಲ್ಲಿ ಲೀಲಾವತಿ ಅವರು ಡಾ. ರಾಜ್​ಕುಮಾರ್​ ಪ್ರಶಸ್ತಿ ಪಡೆದರು.

spot_img

More articles

LEAVE A REPLY

Please enter your comment!
Please enter your name here