Thursday, September 19, 2024

ಉಡುಪಿ ನಗರಸಭೆ ಉಪಚುನಾವಣೆ; ವೇಳಾಪಟ್ಟಿ ಪ್ರಕಟ

Must read

ಉಡುಪಿ: ಉಡುಪಿ ನಗರಸಭೆಯ 13ನೇ ಮೂಡುಪೆರಂಪಳ್ಳಿ ವಾರ್ಡಿನ ಸಾಮಾನ್ಯ ಮಹಿಳೆ ಮೀಸಲಾತಿ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.


ಅದರಂತೆ ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಡಿ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ. 18 ಕೊನೆಯ ದಿನವಾಗಿದೆ. ಡಿ. 27 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ಮರು ಮತದಾನದ ಅವಶ್ಯವಿದ್ದಲ್ಲಿ ಡಿ. 29 ರಂದು ನಡೆಸಲಾಗುವುದು.

ಡಿ. 30 ರಂದು ತಾಲೂಕು ಕೇಂದ್ರ ಸ್ಥಳದಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯವು ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here