ಉಡುಪಿ: ಹೆರ್ಗ ಗ್ರಾಮದ ಸರಳೇಬೆಟ್ಟು–ಕೊಡಂಗ ಪ್ರದೇಶದಲ್ಲಿ ಶುಕ್ರವಾರ ನಡೆದ ಮಣಿಪಾಲ ಕ್ರೈಸ್ಟ್ ಸ್ಕೂಲ್ ಶಾಲಾ ಬಸ್ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಮುಖಂಡರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಮುಖಂಡರು, ವೈದ್ಯರಿಂದ ಆಕೆಯ ಆರೋಗ್ಯದ ಕುರಿತು ಮಾಹಿತಿ ಪಡೆದು, ಬಾಲಕಿ ಹಾಗೂ ಆಕೆಯ ಪೋಷಕರಿಗೆ ಧೈರ್ಯ ತುಂಬಿದರು.
ಬಳಿಕ ಕ್ರೈಸ್ಟ್ ಸ್ಕೂಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗವು, ಶಾಲೆಯ ಮುಖ್ಯೋಪಾಧ್ಯಾಯಿನಿಯೊಂದಿಗೆ ಘಟನೆಯ ಕುರಿತು ಚರ್ಚಿಸಿದರು. ಮಳೆಗಾಲದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ, ಶಾಲಾ ವಾಹನಗಳ ಸಂಚಾರದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಕೇಶ್ ಕುಂದರ್ ಹಾಗೂ ಶರತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಮತ್ತು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.
ಶಾಲಾ ಬಸ್ ಅಪಘಾತದ ಗಾಯಾಳು ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ ಕಾಂಗ್ರೆಸ್ ನಿಯೋಗ
More articles

