Friday, July 17, 2026

ಆಗುಂಬೆ ಘಾಟಿ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ; ಟನಲ್ ನಿರ್ಮಾಣ ಕುರಿತು ಪರಿಶೀಲನೆ

Must read

ಉಡುಪಿ: ಆಗುಂಬೆ ಘಾಟಿಯಲ್ಲಿ ಸುರಂಗ (ಟನಲ್) ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಆಗುಂಬೆ ಸೂರ್ಯಾಸ್ತ ವೀಕ್ಷಣಾ ಸ್ಥಳದಿಂದ ಘಾಟಿಯ ಭೌಗೋಳಿಕ ಪರಿಸ್ಥಿತಿ ಹಾಗೂ ರಸ್ತೆ ಸ್ಥಿತಿಯನ್ನು ಅವಲೋಕಿಸಿದ ಸಚಿವರು, ಘಾಟಿಯ ಧಾರಣಾ ಸಾಮರ್ಥ್ಯ ಕುಸಿತ ಹಾಗೂ ಸುರಕ್ಷತೆ ಕುರಿತಂತೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿದರು.
ಸಚಿವರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಅವರು ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟಿಗೂ ಭೇಟಿ ನೀಡಿ ಅಲ್ಲಿನ ರಸ್ತೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು.
ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಾಣದ ಸಾಧ್ಯತೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರ ಭೇಟಿ ಸ್ಥಳೀಯರಲ್ಲಿ ಕುತೂಹಲ ಹಾಗೂ ಗೊಂದಲಕ್ಕೂ ಕಾರಣವಾಗಿದೆ.

spot_img

More articles

LEAVE A REPLY

Please enter your comment!
Please enter your name here