ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 23ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಜಿಲ್ಲಾಡಳಿತ ರಜೆ ಘೋಷಿಸಿದೆ.
ಈ ದಿನ ಯಾವುದೇ ತರಗತಿಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದು, ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ–2005ರ ಕಲಂ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪಾಲಕರು ಮಕ್ಕಳನ್ನು ನೀರಿನ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರತೀರಗಳಿಗೆ ತೆರಳದಂತೆ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮನವಿ ಮಾಡಲಾಗಿದೆ.
ಭಾರಿ ಮಳೆ ಮುನ್ನೆಚ್ಚರಿಕೆ: ಜುಲೈ 23ರಂದು ದ.ಕ. ಜಿಲ್ಲೆಯ ಎಲ್ಲ ಶಾಲೆ–ಕಾಲೇಜುಗಳಿಗೆ ರಜೆ
More articles

