Thursday, September 19, 2024

ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

Must read

ಬೆಂಗಳೂರು: ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.


ಬೆಂಗಳೂರಿನಲ್ಲಿ ಭಾನುವಾರ ನಡೆದ ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


ಹಿಂದುಳಿದ ಜಾತಿಗಳ ಸಂಘಟನೆ, ಶಿಕ್ಷಣ, ಹೋರಾಟದ ಬಗ್ಗೆ ಹಾಗೂ ಈಡಿಗ ಸಮಾಜಕ್ಕೆ ಏನು ಅಗತ್ಯ ಎಂದು ಪ್ರಸ್ತಾಪ ಮಾಡಿದ್ದಾರೆ. ಅನೇಕ ಒತ್ತಾಯ ಬೇಡಿಕೆ ಗಳನ್ನು ಸಲ್ಲಿಸಿದ್ದಾರೆ. ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಯಾವುದೇ ಭರವಸೆ ನೀಡಲಾಗುವುದಿಲ್ಲ. ಅಧಿವೇಶನ ಮುಗಿದ ಕೂಡಲೇ ಬಂದು ಕಂಡರೆ ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.


1995 ರಲ್ಲಿ ಹಣಕಾಸಿನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದಿದ್ದ ಸಮಾವೇಶವನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅರ್ಥಪೂರ್ಣ ವಾಗಿ ಆಚರಿಸಿದ್ದರು ಎಂದರು. ಅಂದಿನ ಮುಖ್ಯಮಂತ್ರಿ ಹೆಚ್.ಡಿ.ದೇವೇಗೌಡ ಅವರೂ ಕೂಡ ಭಾಗವಹಿಸಿದ್ದರು ಎಂದು ಸ್ಮರಿಸಿದರು. ಅಂದೂ ಕೂಡ ಬೇಡಿಕೆಗಳನ್ನು ಈಡೇರಿಸಲಾಗಿತ್ತು ಎಂದು ಸ್ಮರಿಸಿದರು.


ನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರ ಮಾಡಬೇಕೆಂದು ಒತ್ತಾಯ ಮಾಡಿದ್ದ ಹಿನ್ನೆಲೆಯಲ್ಲಿ ಅವರ ಜಯಂತಿ ಯನ್ನು ರಾಜ್ಯ ಸರ್ಕಾರವೇ ಆಚರಿಸುವಂತೆ ತೀರ್ಮಾನ ಮಾಡಲಾಯಿತು ಎಂದರು.


ನಾರಾಯಣ ಗುರುಗಳ ಮಾರ್ಗದರ್ಶನ ಅವಶ್ಯ , ಅವರ ವಿಚಾರಗಳು, ಇಂದಿಗೂ, ಎಂದೆಂದಿಗೂ ಪ್ರಸ್ತುತ. ಕೇರಳದಲ್ಲಿ ಅವಮಾನಗಳನ್ನು ಸಹಿಸಿ ಅದರ ವಿರುದ್ಧ ಸಾತ್ವಿಕ ಕೋಪವಿದ್ದರೂ ಸಹಿಸಿ ಜನರ ಸಂಘಟನೆ ಮಾಡಿ, ಜಾಗೃತಿ ಮೂಡಿಸಲು, ಬದಲಾವಣೆ ತರಲು ಇಡೀ ಬದುಕನ್ನು ಮುಡಿ ಪಾಗಿಟ್ಟರು. ಆರ್ಥಿಕವಾಗಿ, ಸಾಮಾಜಿಕವಾಗಿ ವಂಚಿತರಾಗಿರುವ ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದರು. ಮನುಷ್ಯರೆಲ್ಲರೂ ಒಂದೇ, ಜಾತಿ, ಒಂದೇ ಮತ, ಒಂದೇ ದೇವರು ಎಂದು ಹೇಳಿದ್ದರು. ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ಮಾಡಿಕೊಂಡಿರುವವರು ನಾವು. ಜಾತಿ ಹೇಳಬೇಡ, ಜಾತಿ ಕೇಳಬೇಡಿ ಹಾಗೂ ಜಾತಿ ನೋಡಬೇಡ ಎಂದು ನಾರಾಯಣ ಗುರುಗಳು ಹೇಳಿದ್ದರು ಎಂದರು.


ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ.ಎಂ.ತಿಮ್ಮೆಗೌಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಖ್ಯಾತ ನಟ ಶಿವರಾಜ್ ಕುಮಾರ್, ಶಾಸಕರು, ಮಾಜಿ ಸಚಿವರು, ಶಾಸಕರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here