Saturday, October 17, 2026

ರಾಜ್ಯ ಸಂಪುಟ ವಿಸ್ತರಣೆ ಇಂದು; 20 ಮಂದಿಗೆ ಸಚಿವ ಸ್ಥಾನ, ಹಲವು ಹೊಸ ಮುಖಗಳಿಗೆ ಅವಕಾಶ

Must read

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೋಮವಾರ (ಆ. 3) ಸಂಜೆ ನಡೆಯಲಿದ್ದು, 20 ಮಂದಿ ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಸಚಿವರಾಗಿ ಪ್ರಮಾಣವಚನ ಬೋಧಿಸಲು ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ಸಂಪುಟದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದ್ದು, ಕೆಲ ಹಿರಿಯ ಸಚಿವರು ಸ್ಥಾನ ಕಳೆದುಕೊಂಡಿದ್ದಾರೆ.
ಇತ್ತೀಚೆಗೆ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯೆಯಾಗಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ಲಭಿಸಿದೆ. ನೂತನ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಪರಿಷತ್ ಸದಸ್ಯೆ ಅವರೇ ಆಗಿದ್ದಾರೆ.
ರೋಣ ಶಾಸಕ ಜಿ.ಎಸ್. ಪಾಟೀಲ ಅವರನ್ನು ವಿಧಾನಸಭೆಯ ಸಭಾಧ್ಯಕ್ಷರಾಗಿ (ಸ್ಪೀಕರ್) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಉಪಸಭಾಧ್ಯಕ್ಷರಾಗಿ (ಉಪ ಸ್ಪೀಕರ್) ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ದಾವಣಗೆರೆಯ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಅಚ್ಚರಿಯ ರೀತಿಯಲ್ಲಿ ಸಚಿವ ಸ್ಥಾನ ದೊರೆತಿದೆ. ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಪುತ್ರ ಅಜಯ್ ಸಿಂಗ್ ಕೂಡ ಮೊದಲ ಬಾರಿಗೆ ಸಚಿವ ಸಂಪುಟ ಪ್ರವೇಶಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸಂಪುಟದಲ್ಲಿದ್ದ ಎಚ್.ಸಿ. ಮಹದೇವಪ್ಪ, ಎಂ.ಸಿ. ಸುಧಾಕರ್, ದಿನೇಶ್ ಗುಂಡೂರಾವ್, ಎಚ್.ಕೆ. ಪಾಟೀಲ, ಕೆ. ವೆಂಕಟೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ ಹಾಗೂ ಶರಣಬಸಪ್ಪ ದರ್ಶನಾಪುರ ಅವರಿಗೆ ಈ ಬಾರಿ ಸಚಿವ ಸ್ಥಾನ ಲಭಿಸಿಲ್ಲ.
ನೂತನ ಸಚಿವರ ಪಟ್ಟಿ:
ಪಿ.ಎಂ. ನರೇಂದ್ರಸ್ವಾಮಿ
ಶಿವರಾಜ್ ತಂಗಡಗಿ
ರುದ್ರಪ್ಪ ಲಮಾಣಿ
ಕೆ.ಎಸ್. ಬಸವಂತಪ್ಪ
ಬಿ. ನಾಗೇಂದ್ರ
ಟಿ. ರಘುಮೂರ್ತಿ
ಜಮೀರ್ ಅಹಮದ್ ಖಾನ್
ರಿಜ್ವಾನ್ ಅರ್ಷದ್
ಸಂತೋಷ್ ಲಾಡ್
ಮಧು ಬಂಗಾರಪ್ಪ
ಪುಟ್ಟರಂಗಶೆಟ್ಟಿ
ಮಂಕಾಳ ವೈದ್ಯ
ಅಜಯ್ ಸಿಂಗ್
ಎನ್. ಚಲುವರಾಯಸ್ವಾಮಿ
ಕೆ.ಎಂ. ಶಿವಲಿಂಗೇಗೌಡ
ಎಚ್.ಸಿ. ಬಾಲಕೃಷ್ಣ
ಗಾಯತ್ರಿ ಶಾಂತೇಗೌಡ
ಬಸವರಾಜ ರಾಯರೆಡ್ಡಿ
ವಿಜಯಾನಂದ ಕಾಶಪ್ಪನವರ್
ಲಕ್ಷ್ಮಣ ಸವದಿ.

spot_img

More articles

LEAVE A REPLY

Please enter your comment!
Please enter your name here