ಭೋಪಾಲ್: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.
ಉಜ್ಜೈನಿ ಶಾಸಕ ಮೋಹನ್ ಯಾದವ್ ಅವರನ್ನು ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.
ನಾಲ್ಕು ಬಾರಿ ಮಧ್ಯಪ್ರದೇಶದ ಸಿಎಂ ಆಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟು ಹೊಸ ಮುಖಕ್ಕೆ ಮಣೆ ಹಾಕಿದೆ. ಇದರೊಂದಿಗೆ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ಕೊನೆಗೂ ತೆರೆಬಿದ್ದಿದೆ.
ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಪಟೇಲ್, ನರೇಂದ್ರ ಸಿಂಗ್ ತೋಮರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಮಧ್ಯಪ್ರದೇಶ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮ ಅಲ್ಲದೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಿ.ಎಂ ಸ್ಥಾನದ ಆಕಾಂಕ್ಷಿಗಳಾಗಿದ್ದರು.