Tuesday, September 1, 2026

ಮಣಿಪಾಲ: ಕುಡಿಯುವ ನೀರಿನ ಪಂಪ್‌ಹೌಸ್‌ ಬಳಿ‌ ಆಟೋ ಪಲ್ಟಿ- ತಾಯಿಗೆ ಗಾಯ, ಮಗು ಅಪಾಯದಿಂದ ಪಾರು

Must read

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಆಟೋವೊಂದು ರಾಷ್ಟ್ರೀಯ ಹೆದ್ದಾರಿ 169ಎಯ ಈಶ್ವರನಗರದ ಇಳಿಜಾರು ರಸ್ತೆಯಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ್‌ಹೌಸ್‌ಗೆ ನುಗ್ಗಿ ಪಲ್ಟಿಯಾದ ಘಟನೆ ಗುರುವಾರ ರಾತ್ರಿ ಸುಮಾರು 11ಗಂಟೆಗೆ ನಡೆದಿದೆ.
ಉಡುಪಿಯಿಂದ ಹಿರಿಯಡ್ಕದ ಕಡೆಗೆ ಬಾಡಿಗೆಗೆ ತೆರಳುತ್ತಿದ್ದ ಆಟೋ ಈಶ್ವರನಗರದ ಇಳಿಜಾರಿನಲ್ಲಿ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಪಂಪ್‌ಹೌಸ್‌ಗೆ ನುಗ್ಗಿದೆ. ಆಟೋದಲ್ಲಿದ್ದ ಮಹಿಳೆಗೆ ಗಾಯವಾಗಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋ ಚಾಲಕ ಪೆರಂಪಳ್ಳಿಯವರು ಎಂದು ತಿಳಿದುಬಂದಿದೆ.
ಈಶ್ವರನಗರದ ಈ ಭಾಗದಲ್ಲಿ ರಸ್ತೆ ಏಕಾಏಕಿ ತಿರುವು ಪಡೆದುಕೊಳ್ಳುವುದರ ಜೊತೆಗೆ ಇಳಿಜಾರು ಇರುವುದರಿಂದ ವಾಹನ ಚಾಲಕರು ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಈ ಸ್ಥಳದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ವಿನ್ಯಾಸವೇ ಅಪಘಾತಗಳಿಗೆ ಪ್ರಮುಖ ಕಾರಣವಾಗುತ್ತಿದೆ ಎಂಬುದು ಸ್ಥಳೀಯರ ಆರೋಪ.
ತಿರುವಿನ ಮುನ್ನೆಚ್ಚರಿಕೆ ಸೂಚನಾ ಫಲಕ ಅಳವಡಿಸಿದರೂ ಇಳಿಜಾರು ಹಾಗೂ ಏಕಾಏಕಿ ಬರುವ ತಿರುವಿನಿಂದಾಗಿ ವಾಹನ ಚಾಲಕರಿಗೆ ಸಮರ್ಪಕವಾಗಿ ರಸ್ತೆ ಅಂದಾಜಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಪಘಾತ ತಡೆಗಟ್ಟಲು ರಸ್ತೆಯ ವಿನ್ಯಾಸದಲ್ಲಿ ಅಗತ್ಯ ಬದಲಾವಣೆ ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here