Monday, August 31, 2026

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ, ಗುತ್ತಿಗೆದಾರ ಡೇವಿಡ್‌ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Must read

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ.
ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್‌ ಅವರಿಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಶೂಟೌಟ್‌ಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವೈಯಕ್ತಿಕ ದ್ವೇಷ ಅಥವಾ ಇತರ ಕಾರಣಗಳ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

spot_img

More articles

LEAVE A REPLY

Please enter your comment!
Please enter your name here