Sunday, August 30, 2026

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು

Must read

ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತರನ್ನು ಹೆಬ್ರಿ ಸಂತೆಕಟ್ಟೆ ಸದಾನಂದ ನಾಯಕ್(55) ಎಂದು ಗುರುತಿಸಲಾಗಿದೆ.
ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಮೃತದೇಹ ಕಾರಿನೊಳಗೆ ಸಿಲುಕಿಕೊಂಡಿದೆ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿದ್ದು, ಕಾರಿನ ಮೇಲಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.
ಮರ ತೆರವುಗೊಳಿಸಿದ ಬಳಿಕವಷ್ಟೇ ಮೃತದೇಹವನ್ನು ಕಾರಿನಿಂದ ಹೊರತೆಗೆಯಲು ಸಾಧ್ಯವಾಗಲಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು

spot_img

More articles

LEAVE A REPLY

Please enter your comment!
Please enter your name here