Friday, October 16, 2026

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Must read

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶಿಸಿದೆ.
ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ನ್ಯಾಯಾಂಗ ಬಂಧನದಲ್ಲಿದ್ದರು. ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದಲ್ಲಿ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಪುರುಷೋತ್ತಮ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.
ಆರೋಪಿಗಳಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲು ಹಾಗೂ ಹತ್ಯೆಯ ಹಿಂದಿರುವ ಕಾರಣ, ಸಂಚು ಮತ್ತು ಇತರ ಆರೋಪಿಗಳ ಪಾತ್ರದ ಕುರಿತು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

spot_img

More articles

LEAVE A REPLY

Please enter your comment!
Please enter your name here