Friday, October 16, 2026

ಉಡುಪಿ: ಸಾಯಿರಾಜ್ ಸೊಸೈಟಿಯ ಸಿಇಒ ನೇಣಿಗೆ ಶರಣು

Must read

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್‌ ಮೆಡೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ( 44) ಎಂದು ಗುರುತಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತನಿಖೆ ಮುಂದುವರಿದಿದೆ.

.

spot_img

More articles

LEAVE A REPLY

Please enter your comment!
Please enter your name here