Sunday, August 16, 2026

ರಾಜ್ಯದಲ್ಲಿ ಗುಟ್ಕಾ, ಪಾನ್‌ ಮಸಾಲ ನಿಷೇಧ

Must read

ಬೆಂಗಳೂರು: ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲವನ್ನು ರಾಜ್ಯದಾದ್ಯಂತ ನಿಷೇಧಿಸಿ ಆಹಾರ ಸುರಕ್ಷತೆ ಇಲಾಖೆ ಆದೇಶ ಹೊರಡಿಸಿದೆ.
ಇದೇ 10ರಂದು ಹೊರಡಿಸಲಾದ ಈ ಆದೇಶ ಒಂದು ವರ್ಷದ ಅವಧಿಗೆ ಜಾರಿಯಲ್ಲಿರಲಿದೆ. ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅಡಿ ಈ ಕ್ರಮ ಕೈಗೊಳ್ಳಲಾಗಿದೆ.
ಗುಟ್ಕಾ ಹಾಗೂ ಪಾನ್ ಮಸಾಲದ ಜತೆಗೆ, ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಇತರೆ ಉತ್ಪನ್ನಗಳನ್ನೂ ಪ್ರತ್ಯೇಕವಾಗಿ ಮಾರಾಟ ಮಾಡುವುದನ್ನು ನಿಷೇಧ ಮಾಡಲಾಗಿದೆ. ಪೊಟ್ಟಣಗಳನ್ನು ಮಾಡಲ್ಪಟ್ಟ ಹಾಗೂ ಮಾಡಲ್ಪಡದಿರುವ, ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಮಾರಾಟ ಅಥವಾ ವಿತರಣೆಗೂ ಈ ನಿಷೇಧ ಅನ್ವಯಿಸುತ್ತದೆ.
ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್‌ ಮಸಾಲಾವನ್ನು ಸ್ಯಾಶೆ, ಪೌಚ್, ಪೊಟ್ಟಣ ಹಾಗೂ ಕಂಟೇನ‌ರ್ ಸೇರಿ ಯಾವುದೇ ವಿಧಾನಗಳಲ್ಲಿ ಸಂಗ್ರಹ ಮತ್ತು ಮಾರಾಟಕ್ಕೆ ಅವಕಾಶವಿಲ್ಲ ಎಂದು ಇಲಾಖೆ ತಿಳಿಸಿದೆ.
ನಿಷೇಧಿತ ತಂಬಾಕು ಹಾಗೂ ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗೆ ಮಾಹಿತಿ ನೀಡಬೇಕು. ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಇಲಾಖೆ ಆಯುಕ್ತ ಕೆ. ಶ್ರೀನಿವಾಸ ಮನವಿ ಮಾಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here