Wednesday, October 14, 2026

ನೂತನ ಸಚಿವರಿಗೆ ಖಾತೆ ಹಂಚಿಕೆ : ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ಯಾರಿಗೆ ಯಾವ ಜವಾಬ್ದಾರಿ?

Must read

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ವಹಿಸಿ ರಾಜ್ಯ ಸರಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಡಿ.ಕೆ.ಶಿವಕುಮಾರ್ (ಮುಖ್ಯಮಂತ್ರಿ): ಹಣಕಾಸು, ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಮಾಹಿತಿ, ಕಾನೂನು ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಕೃಷಿ ಮಾರುಕಟ್ಟೆ, ನಗರ ಮತ್ತು ಗ್ರಾಮಾಂತರ ಯೋಜನೆ, BDA ಮತ್ತು BMRDA ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಹಂಚಿಕೆಯಾಗದ ಎಲ್ಲಾ ಖಾತೆಗಳು.

► ಜಮೀರ್ ಅಹ್ಮದ್‌ ಖಾನ್: ವಸತಿ ಇಲಾಖೆ.

► ರಾಮಲಿಂಗಾರೆಡ್ಡಿ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ.

► ಲಕ್ಷ್ಮಣ ಸವದಿ : ಸಹಕಾರ

► ರುದ್ರಪ್ಪ ಮಾನಪ್ಪ ಲಮಾಣಿ: ಸಕ್ಕರೆ ಮತ್ತು ಜವಳಿ.

► ಕೆ.ಎಚ್. ಮುನಿಯಪ್ಪ: ಸಮಾಜ ಕಲ್ಯಾಣ

► ಶಿವರಾಜ್ ತಂಗಡಗಿ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ.

► ಯು.ಟಿ. ಖಾದರ್: ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ.

► ಟಿ. ರಘುಮೂರ್ತಿ: ಪರಿಶಿಷ್ಟ ಪಂಗಡಗಳ (ST) ಕಲ್ಯಾಣ.

► ಡಾ.ಅಜಯ್ ಸಿಂಗ್: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ.

► ಚೆಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ.

► ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ.

► ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ.

► ಶಿವಲಿಂಗೇಗೌಡ: ಅಬಕಾರಿ

► ಪುಟ್ಟರಂಗಶೆಟ್ಟಿ: ಪಶುಸಂಗೋಪನೆ ಮತ್ತು ರೇಷ್ಮೆ.

► ವಿಜಯಾನಂದ ಕಾಶಪ್ಪನವರ್: ಸಣ್ಣ ಪ್ರಮಾಣದ ಕೈಗಾರಿಕೆಗಳು, ಸಾರ್ವಜನಿಕ ಉದ್ಯಮಗಳು.

► ಸಂತೋಷ್ ಲಾಡ್: ಕಾರ್ಮಿಕ ಮತ್ತು ಉದ್ಯೋಗ.

► ಕೆ.ಎಸ್. ಬಸವಂತಪ್ಪ: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ.

► ಎಸ್.ಎಸ್. ಮಲ್ಲಿಕಾರ್ಜುನ್: ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ.

► ರಿಜ್ವಾನ್ ಅರ್ಷದ್: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು.

► ನರೇಂದ್ರ ಸ್ವಾಮಿ: ಕೃಷಿ.

► ಎಚ್.ಸಿ. ಬಾಲಕೃಷ್ಣ: ಪೌರಾಡಳಿತ.

►ಬಿ.ನಾಗೇಂದ್ರ: ಯೋಜನೆ ಮತ್ತು ಸಾಂಖ್ಯಿಕ.

ಇತ್ತೀಚೆಗೆ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆ ಹಂಚಿಕೆ ವಿಳಂಬವಾಗಿದ್ದರಿಂದ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನವೂ ವ್ಯಕ್ತವಾಗಿತ್ತು. ಆಗಸ್ಟ್ 13ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಅದಕ್ಕೂ ಮುನ್ನ ಖಾತೆ ಹಂಚಿಕೆ ಪೂರ್ಣಗೊಳಿಬೇಕಾದ ಒತ್ತಡದಲ್ಲಿ ಸರಕಾರ ಸಿಲುಕಿತ್ತು. ಇದೀಗ ಖಾತೆ ಹಂಚಿಕೆ ಬಹುತೇಕ ಪೂರ್ಣಗೊಂಡಿದೆ.

spot_img

More articles

LEAVE A REPLY

Please enter your comment!
Please enter your name here