Sunday, August 16, 2026

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌

Must read

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್‌ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಸಚಿವರು, ದೇವಾಲಯಗಳಲ್ಲಿ ಪ್ರತಿನಿತ್ಯ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಿ, ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಅಗರಬತ್ತಿ, ಬಿದಿರು ರಹಿತ ಧೂಪದಕಡ್ಡಿ ಸೇರಿದಂತೆ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಯೋಜನೆಯನ್ನು ಜಿಲ್ಲಾಡಳಿತವು ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ಕೈಗೆತ್ತಿಕೊಳ್ಳಲಿದೆ ಎಂದು ಹೇಳಿದರು.
ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಕಾಲ್ಪನಿಕ ಮಾಸ್ಕಾಟ್‌ನ್ನು ಅನಾವರಣಗೊಳಿಸಿದ ಸಚಿವರು, ‘ಉಡುಪಿ ಸುಗಂಧ’ವನ್ನೂ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಯಶಪಾಲ್ ಸುವರ್ಣ ವಹಿಸಿದ್ದರು. ಮಂಜುನಾಥ ಭಂಡಾರಿ, ಎಂ.ಎ. ಗಫೂರ್, ಅಶೋಕ್ ಕುಮಾರ್ ಕೊಡವೂರು, ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಸಚಿವರು ಆಕರ್ಷಕ ಪಥಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿದರು. ಬಳಿಕ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿದರು. ಕೊನೆಯಲ್ಲಿ ಉಡುಪಿ ಮತ್ತು ಸುತ್ತಮುತ್ತಲಿನ ಶಾಲೆಗಳ ವಿದ್ಯಾರ್ಥಿಗಳು ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

spot_img

More articles

LEAVE A REPLY

Please enter your comment!
Please enter your name here