ಕುಂದಾಪುರ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಆರೋಪಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಎಂದು ಗುರುತಿಸಲಾಗಿದೆ. ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು ನಾಲ್ಕು ಕಂತಿನಲ್ಲಿ 1.20ಲಕ್ಷ ರೂ. ಹಣ ಬಿಡುಗಡೆಯಾಗಿತ್ತು. ಈ ಹಣದಲ್ಲಿ ಅರ್ಧಂಶ ಹಣ ಮಂಜೂರು ಮಾಡಿಸಲು 10ಸಾವಿರ ರೂ. ಖರ್ಚಾಗಿದೆ. ಹೀಗಾಗಿ ಆ ಹಣವನ್ನು ವಾಸಾಸ್ಸು ನೀಡುವಂತೆ ಪಿಡಿಒ ಲಂಚ ಬೇಡಿಕೆ ಇಟ್ಟಿದ್ದನು.
ಈ ಬಗ್ಗೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದು, ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ತೆಕ್ಕಟ್ಟೆ ಜಂಕ್ಷನ್ನಲ್ಲಿ ದೂರುದಾರರಿಂದ 10ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಜಯಂತ್ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ