Thursday, August 20, 2026

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

Must read

ಉಡುಪಿ: ಅಲೆವೂರು ಗ್ರಾಮದ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿರುವ ಬಾಳೆಹಣ್ಣು ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ 3–4 ಗೋದಾಮುಗಳ ಮೇಲೆ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಬಾಳೆಹಣ್ಣು ಹಣ್ಣಾಗಿಸಲು ಬಳಸುತ್ತಿದ್ದ ಹಾನಿಕಾರಕ ರಾಸಾಯನಿಕಗಳು ಹಾಗೂ ಕೃತಕ ಬಣ್ಣ ನೀಡುವ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಬಾಳೆಹಣ್ಣುಗಳಿಗೆ ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಕೆ ಮಾಡುತ್ತಿದ್ದ ಆರೋಪದ ಮೇರೆಗೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ದಾಳಿ ವೇಳೆ ರಾಸಾಯನಿಕಗಳನ್ನು ಬಳಸಲು ಉಪಯೋಗಿಸುತ್ತಿದ್ದ ಪರಿಕರಗಳು ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ ವಾಹನಗಳನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಗ್ಯಕ್ಕೆ ಹಾನಿಕಾರಕವಾದ ರಾಸಾಯನಿಕಗಳನ್ನು ಬಳಸಿ ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸುವುದು ಹಾಗೂ ಬಣ್ಣ ನೀಡುವುದರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಈ ಕುರಿತು ಮುಂದಿನ ತನಿಖೆ ನಡೆಸಲಾಗುತ್ತಿದೆ.

spot_img

More articles

LEAVE A REPLY

Please enter your comment!
Please enter your name here