Thursday, October 15, 2026

ಉಡುಪಿ: ಸ್ಯಾಕ್ಸಫೋನ್ ವಾದಕಿ ಆತ್ಮಹತ್ಯೆ

Must read

ಉಡುಪಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ (22) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ನೀಲಾವರ ಗ್ರಾಮದ ನಿವಾಸಿ ನಮೃತಾ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಯಾವುದೋ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದ ಅವರನ್ನು ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

spot_img

More articles

LEAVE A REPLY

Please enter your comment!
Please enter your name here