Friday, October 16, 2026

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.25ರಂದು ಈದ್ ಮಿಲಾದ್ ರಜೆ

Must read

ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಆ.26ರ ಬದಲಾಗಿ ಆ.25ರಂದು ನೀಡಲು ನಿರ್ಧರಿಸಲಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಆದೇಶ ಹೊರಡಿಸಿದ್ದಾರೆ.
ಈದ್ ಮಿಲಾದ್ ಹಬ್ಬದ ಅಂಗವಾಗಿ ಆ.26ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳ ಕೋರಿಕೆಯ ಮೇರೆಗೆ, ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಜೆಯನ್ನು ಆ.25ಕ್ಕೆ ಬದಲಾಯಿಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆ ಆ.25ರಂದು ಇರಲಿದೆ.

spot_img

More articles

LEAVE A REPLY

Please enter your comment!
Please enter your name here