Friday, August 28, 2026

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನ ಬರ್ಬರ ಹತ್ಯೆ

Must read

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಕೊಲೆಗೈದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಮೃತನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹ ಕಾರ್ಮಿಕರ ನಡುವೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಅಭಿಷೇಕ್‌ನನ್ನು ಸಹ ಕಾರ್ಮಿಕನೊಬ್ಬ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ ಹಾಗೂ ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆತನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಲೆಗೆ ನಿಖರ ಕಾರಣವೇನು ಹಾಗೂ ಘಟನೆಯ ಸಂಪೂರ್ಣ ವಿವರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here