Friday, August 28, 2026

ಶ್ರೀನಾರಾಯಣ ಗುರುಗಳ ಜನ್ಮಜಯಂತಿ: ಆ.30ರಂದು ಗುರು ಸಂದೇಶ ಸಾಮರಸ್ಯ ಜಾಥಾ

Must read

ಉಡುಪಿ: ಶ್ರೀ ನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ನಾರಾಯಣಗುರು ಆಡಿಟೋರಿಯಂನಲ್ಲಿ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಎಸ್‌. ಕೆ. ಸಾಲ್ಯಾನ್ ಬೆಳ್ಳಣ್, ಮಲ್ಪೆ ಸಾಯಿಶ್ಯಾಮ್ ಬೋಟ್ ಹರೀಶ್, ಮಣಿಪಾಲ ಉದಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ರಮೇಶ್ ಎ. ಬಂಗೇರ, ಗ್ರೂಪ್ ಆಫ್ ಶಿವಸಾಗ‌ರ್ ಆಡಳಿತ ನಿರ್ದೇಶಕ ಪ್ರಭಾಕ‌ರ್ ಪೂಜಾರಿ, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಡ್ಡೆ, ಉಡುಪಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಮೇಶ್‌ ಕಾಂಚನ್, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ, ಆದಿಉಡುಪಿ ಇದರ ಅಧ್ಯಕ್ಷ ಸೂರ್ಯೋದಯ ಪೆರಂಪಳ್ಳಿ, ಮಣಿಪಾಲ ಬಬ್ಬುಸ್ವಾಮಿ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮಣಿಪಾಲ, ಕಂಗಣಬೆಟ್ಟು ಶ್ರೀ ಭ.ತೀ.ಭಕ್ತ ವೃಂದ (ರಿ.),ಕಟ್ಟಡ ಸಮಿತಿ ಅಧ್ಯಕ್ಷ ವಿಶ್ವನಾಥ್ ಬೆಟ್ಟಡ,ತೋನ್ಸೆ ಬ್ರಹ್ಮ ಬೈದರ್ಕಳ ಪಂಚಧೂಮಾವತೀ ಗರೋಡಿಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್ ಜತ್ತನ್, ಬಿಲ್ಲವ ಸಂಘ ಪಡುಬಿದ್ರಿ ಇದರ ಅಧ್ಯಕ್ಷ ವೈ. ಸುಧೀರ್ ಪಡುಬಿದ್ರಿ, ಬಿಲ್ಲವ ಸೇವಾ ಸಂಘ (ರಿ.) ಸಂತೆಕಟ್ಟೆ ಇದರ ಗೌರವಾಧ್ಯಕ್ಷ ಭಾಸ್ಕ‌ರ್ ಜತ್ತನ್, ಉದ್ಯಮಿ ಶ್ರೀ ಸೂರಜ್ ಪೂಜಾರಿ ಮಲ್ಪೆ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ್ ಸನಿಲ್ ಉಪಸ್ಥಿತರಿರುವವರು ಎಂದರು.
ಮಧ್ಯಾಹ್ನ 1ಗಂಟೆಗೆ ರಾಜ್ಯಮಟ್ಟದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಗುರು ಸಂದೇಶ ಸಾಮರಸ್ಯ ಜಾಥಾಕ್ಕೆ ಚಾಲನೆ ನೀಡಲಾಗುವುದು. ಜಾಥಾಕ್ಕೆ ಭರತನಾಟ್ಯದಲ್ಲಿ ಗಿನ್ನೆಸ್ ದಾಖಲೆ ಬರೆದ ವಿದುಷಿ ದೀಕ್ಷಾ, ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ, ಎಸ್, ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರೀತಂ ಪೂಜಾರಿ, ಅಂತರಾಷ್ಟ್ರೀಯ ಯೋಗ ಪಟು ತನುಶ್ರೀ ಹಾಗೂ ರಾಷ್ಟ್ರೀಯ ಕರಾಟೆಪಟು ಛಾಯಾ ಎಸ್‌. ಪೂಜಾರಿ ಚಾಲನೆ ನೀಡಲಿದ್ದಾರೆ.
ಬನ್ನಂಜೆ ಬಿಲ್ಲವ ಸಂಘದಿಂದ ಆರಂಭಗೊಳ್ಳುವ ಜಾಥಾವು ಎಸ್ಪಿ ಆಫೀಸ್ ರಸ್ತೆ, ಅಂಬಲಪಾಡಿ ಜಂಕ್ಷನ್, ಕಿನ್ನಿಮೂಲ್ಕಿ, ಬಲಾಯಿಪಾದೆ, ಉದ್ಯಾವರ,ಕಟಪಾಡಿ, ಕಾಪು, ಮೂಳೂರು, ಉಚ್ಚಿಲ, ಪಡುಬಿದ್ರಿ, ಹೆಜಮಾಡಿ ಮಾರ್ಗವಾಗಿ ಸಾಗಿಬಂದು ಕಟಪಾಡಿಯ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಮಾಪ್ತಿಗೊಳ್ಳಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ಆರೋಗ್ಯ ಸಚಿವ ಯು.ಟಿ ಖಾದರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಯತ್ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯಕುಮಾ‌ರ್ ಸೊರಕೆ, ಪ್ರಮೋದ್ ಮಧ್ವರಾಜ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಕಾಂಚನ ಹುಂಡೈನ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಸಾದ್ ರಾಜ್ ಕಾಂಚನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಮಹೇಶ್‌ ಅಂಚನ್, ಕುಂಜಿಬೆಟ್ಟು ವೈಕುಂಟ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಖಾ, ಮೂಲ್ಕಿ ಬಿಲ್ಲವರ ಮಹಾಮಂಡಳದ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಹುಂಡೈನ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಸಾದ್ ರಾಜ್ ಕಾಂಚನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಮಹೇಶ್‌ ಅಂಚನ್, ಕುಂಜಿಬೆಟ್ಟು ವೈಕುಂಟ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಖಾ, ಮೂಲ್ಕಿ ಬಿಲ್ಲವರ ಮಹಾಮಂಡಳದ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಹೆಜಮಾಡೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತಸರ ದಯಾನಂದ ಹೆಜಮಾಡಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್‌ ಸಾಧು ಸಾಲ್ಯಾನ್, ಬನ್ನಂಜೆ ಬಿಲ್ಲವರ ಸಂಘದ ಅಧ್ಯಕ್ಷ ಶಶಿಧರ್ ಅಮೀನ್, ಬ್ರಹ್ಮಾವರ ಬಿಲ್ಲವರ ಸಂಘದ ಅಧ್ಯಕ್ಷ ಬಿ.ಎನ್ ಶಂಕರ ಪೂಜಾರಿ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಾಲ್ ಕುಮಾರ್ ಕಾರ್ಕಳ, ಕಾಪು ಬಿಲ್ಲವ್ವ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್‌ ಪೂಜಾರಿ ಬೀಜಾಡಿ, ಬೈಂದೂರು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ ಬೈಂದೂರು, ಹೆಬ್ರಿ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ ಬೇಳಂಜೆ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಗೌರವಾಧ್ಯಕ್ಷ ದಿವಾಕರ್ ಸನಿಲ್‌, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮಲ್ಪೆ, ವಿಜಯಕೋಟ್ಯಾನ್ ಪಿತ್ರೋಡಿ, ಗೌರವ ಸಲಹೆಗಾರರಾದ ಸುಧಾಕ‌ರ್ ಡಿ ಅಮೀನ್ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here