Monday, August 31, 2026

ಮಣಿಪಾಲ: ರಾಜೀವನಗರ ಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿವೃದ್ಧೆಯ ಶವ ಪತ್ತೆ!

Must read

ಉಡುಪಿ: ಮಣಿಪಾಲದ ರಾಜೀವನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧೆಯೊಬ್ಬರ ಶವವು ಕೊಳೆತ ಸ್ಥಿತಿಯಲ್ಲಿ ಮನೆಯ ಸಮೀಪದ ಗುಡ್ಡೆಯಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದೆ.
ಮೃತರನ್ನು ಗೀತಾ ಮಲ್ಯ (68) ಎಂದು ಗುರುತಿಸಲಾಗಿದೆ. ಅವರು ಹಲವು ವರ್ಷಗಳ ಕಾಲ ತಾತ್ಕಾಲಿಕ ನೆಲೆಯಲ್ಲಿ ಉಡುಪಿಯ ಜಿಲ್ಲಾ ಕೇಂದ್ರ ಅಂಚೆ ಕಚೇರಿಯಲ್ಲಿ ಕೆಲಸ ನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.
ಅನಾರೋಗ್ಯದ ಕಾರಣದಿಂದ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮುಖ್ಯ ಆರಕ್ಷಕ ಸುಕುಮಾರ್ ಶೆಟ್ಟಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕಳೇಬರವನ್ನು ಸ್ಥಳದಿಂದ ತೆರವುಗೊಳಿಸಿ, ಮಣಿಪಾಲದ ಕೆಎಂಸಿ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು. ಮಿಥುನ್ ಹಾಗೂ ಅಜಿತ್ ಸಹಕರಿಸಿದರು.

spot_img

More articles

LEAVE A REPLY

Please enter your comment!
Please enter your name here