Monday, September 7, 2026

ಉಡುಪಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 16 ಶಿಕ್ಷಕರ ಆಯ್ಕೆ

Must read

ಉಡುಪಿ: ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ 2026ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ ತಾಲೂಕುಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 16ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೈಂದೂರು ತಾಲೂಕಿನ ಸಾಲಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗಣೇಶ್, ಬ್ರಹ್ಮಾವರ ತಾಲೂಕಿನ ಆಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರವಿ, ಕುಂದಾಪುರ ತಾಲೂಕಿನ ಅಲ್ಪಾಡಿ ಮೂರುಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಷಾಕುಮಾರಿ, ಉಡುಪಿ ತಾಲೂಕಿನ ವಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸುವಾಸಿನಿ ಹಾಗೂ ಕುಂದಾಪುರದ ಟಿ.ಟಿ.ರೋಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಲೀಲಾವತಿ ನಾಯ್ಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳ ತಾಲೂಕಿನ ಹೆರ್ಮುಂಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀಕಾಂತ್ ಭಟ್ ಅವರೂ ಈ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬ್ರಹ್ಮಾವರ ತಾಲೂಕಿನ 52ನೇ ಹೇರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮಂಜುಳ ಜಯಕರ್, ಕುಂದಾಪುರ ತಾಲೂಕಿನ ನೂಜಾಡಿ-2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ಶೆಟ್ಟಿ, ಕಾರ್ಕಳ ತಾಲೂಕಿನ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಆರ್., ಕುಂದಾಪುರ ತಾಲೂಕಿನ ಬೀಜಾಡಿ-ಪಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪಾರ್ವತಿ ಎಂ. ಆಯ್ಕೆಯಾಗಿದ್ದಾರೆ.
ಉಡುಪಿ ತಾಲೂಕಿನ ಪಡು-ಅಲೆವೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸತೀಶ್ಚಂದ್ರ, ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಸಹ ಶಿಕ್ಷಕ ಕೃಷ್ಣಶೆಟ್ಟಿ ಹಾಗೂ ಬೈಂದೂರು ತಾಲೂಕಿನ ವಂಡ್ರೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಸಹ ಶಿಕ್ಷಕ ರವಿರಾಜ್ ಶೆಟ್ಟಿ ಅವರೂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆರ್. ನಾರಾಯಣ ಶೆಣೈ, ಉಡುಪಿ ತಾಲೂಕಿನ ಪಟ್ಲ ಯು.ಎಸ್. ನಾಯಕ್ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಾಂತಪ್ಪ ಮೂಲಂಗಿ ಹಾಗೂ ಕುಂದಾಪುರ ತಾಲೂಕಿನ ಬನ್ನೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಪಿಯುಷ್ ಡಿ’ಸೋಜಾ ಅವರು ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ, ಬೋಧನಾ ಕಾರ್ಯದಲ್ಲಿನ ಸಾಧನೆ ಹಾಗೂ ಶಾಲೆಯ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

spot_img

More articles

LEAVE A REPLY

Please enter your comment!
Please enter your name here