ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಸಂಭ್ರಮದ ಅಂಗವಾಗಿ ಉಡುಪಿ ಶ್ರೀ ಭಕ್ತ ಕನಕದಾಸರ ಸೇವಾ ಟ್ರಸ್ಟ್ (ರಿ.) ಹಾಗೂ ಉಡುಪಿ ಜಿಲ್ಲಾ ಶ್ರೀ ಕನಕ ಸಮಾಜ ಸೇವಾ ಸಂಘದ ವತಿಯಿಂದ ಭಕ್ತರಿಗೆ ತೀರ್ಥ ಪ್ರಸಾದ ಮತ್ತು ಮಜ್ಜಿಗೆ ವಿತರಣೆ ಮಾಡಲಾಯಿತು.
ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಸಾವಿರಾರು ಭಕ್ತರು ಹಾಗೂ ಸಾರ್ವಜನಿಕರು ಸೇವೆಯ ಪ್ರಯೋಜನ ಪಡೆದುಕೊಂಡರು. ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಸ್ವಯಂಪ್ರೇರಿತರಾಗಿ ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.



