Thursday, September 10, 2026

ಶಿಕ್ಷಕರ ದಿನಾಚರಣೆ: ವಿವಿಧ ಶಾಲೆಗಳ ಶಿಕ್ಷಕರಿಗೆ ಮುದರಂಗಡಿ ಲಯನ್ಸ್ ಕ್ಲಬ್ ನಿಂದ ಸನ್ಮಾನ

Must read

ಉಡುಪಿ: ಮುದರಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕ್ಲಬ್ ಅಧ್ಯಕ್ಷ ಲಯನ್ ಅಂತೋನಿ ವಿನ್ಸೆಂಟ್ ಡಿಸೋಜಾ–ದುರ್ಗದಕಟ್ಟೆ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರನ್ನು ಸನ್ಮಾನಿಸಿ, ಶಿಕ್ಷಕರ ದಿನಾಚರಣೆಯ ಮಹತ್ವವನ್ನು ಎತ್ತಿ ಹಿಡಿದರು.
ಸೇಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ, ಮುದರಂಗಡಿ, ವಿದ್ಯಾನಗರದ ಸರ್ಕಾರಿ ಪ್ರೌಢಶಾಲೆ ಮತ್ತು ಜೂನಿಯರ್ ಕಾಲೇಜು, ಕೆಮುಂಡೆಲುವಿನ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎಲ್ಲೂರಿನ ಎಸ್‌ವಿಸಿಎಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಆತಿಥ್ಯವನ್ನು ಎಂಜೆಎಫ್ ಲಯನ್ ಫೆಲಿಕ್ಸ್ ಫಿಲಿಪ್ ಡಿಸೋಜಾ ನೆರವೇರಿಸಿದರು. ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಮುದರಂಗಡಿ ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here