Friday, September 25, 2026

ಕಾರ್ಮಿಕರ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆಯಿರಿ: ಕಮಲ್ ಷಾ

Must read

ಉಡುಪಿ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಜಾರಿಗೊಳಿಸಲಾಗುತ್ತಿರುವ ವಿವಿಧ ಕಲ್ಯಾಣ ಯೋಜನೆಗಳ ಮಾಹಿತಿ ಪಡೆದು, ಅರ್ಹ ಕಾರ್ಮಿಕರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಹೇಳಿದರು.
ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ, ರಿಕ್ಷಾ ಗ್ಯಾರೇಜುಗಳ ನೂತನ ದರಪಟ್ಟಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಕುರಿತು ಉಡುಪಿ 1ನೇ ವೃತ್ತದ ಕಾರ್ಮಿಕ ನಿರೀಕ್ಷಕ ಸಂಜಯ್ ಎನ್.ಪಿ.ಎಲ್. ಮಾಹಿತಿ ನೀಡಿದರು. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯ ಬಗ್ಗೆಯೂ ಅವರು ವಿವರಿಸಿದರು.
ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ವೇಟ್‌ಲಿಫ್ಟರ್ ಮಾಸ್ಟರ್ ಅನ್ಮೋಲ್ ಬೆನಿಡಿಕ್ಟ್ ಕರ್ಕಡ ಹಾಗೂ ವೃತ್ತಿ ಸಾಧಕ ನಿತಿನ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸದಸ್ಯರ ಮಕ್ಕಳಾದ ಆಯುಷ್ ಜಿ. ಅಮೀನ್, ಸೊಹನ್ ದೇವರಾಜ್ ಸುವರ್ಣ, ಭವೇಶ್ ಜಯರಾಜ್ ಸುವರ್ಣ, ಅದಿತಿ ಎಸ್. ಸಾಲಿಯಾನ್, ಯಶಸ್ ಆಚಾರ್ಯ, ಖುಷಿ ವಸಂತ ಮೂಲ್ಯ ಹಾಗೂ ಕೃಪಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಟಪಾಡಿ ನದಿಯಲ್ಲಿ ನಡೆದ ಗಾಳ ಹಾಕುವ ಸ್ಪರ್ಧೆಯಲ್ಲಿ ವಿಜೇತರಾದ ಸಂಘದ ಸದಸ್ಯ ಸಂತೋಷ್ ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಶಾಂತ್ ನಾಯ್ಕ್, ನಾರಾಯಣ ನಾಯ್ಕ, ಸಂಗಯ್ಯ ಹಿರೇಮಠ, ಸಂಘದ ಉಪಾಧ್ಯಕ್ಷ ಕೃಷ್ಣ ಎಸ್.ಜಿ., ಸ್ಥಾಪಕ ಅಧ್ಯಕ್ಷ ಪ್ರಭಾಕರ್ ಕೆ., ಗೌರವ ಸಲಹೆಗಾರರಾದ ಯಾದವ ಶೆಟ್ಟಿಗಾರ್, ಉದಯಕಿರಣ್, ಜಯ ಸುವರ್ಣ, ಕ್ರೀಡಾ ಕಾರ್ಯದರ್ಶಿಗಳಾದ ಮಧುಸೂಧನ್ ಕನ್ನರ್ಪಾಡಿ, ಸಂತೋಷ್ ಪೂಜಾರಿ ಕಾಪು ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಸಂತೋಷ್ ಕುಮಾರ್ ಲೆಕ್ಕಪತ್ರ ಮಂಡಿಸಿದರು. ಚೇರ್ಮನ್ ವಿಲ್ಸನ್ ಅಂಚನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷರಾದ ವಿನಯ್ ಕುಮಾರ್ ಕಲ್ಮಾಡಿ ಸ್ವಾಗತಿಸಿದರು. ರಾಜೇಶ್ ಜತ್ತನ್ ವಂದಿಸಿದರು. ಪ್ರವೀಣ್ ಕುಮಾರ್ ನಿರೂಪಿಸಿದರು.

spot_img

More articles

LEAVE A REPLY

Please enter your comment!
Please enter your name here