Home ರಾಜ್ಯ ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲ: ಅಸಲು ಕಟ್ಟಿದರೆ ಬಡ್ಡಿ ಮನ್ನಾ- ಸಿಎಂ ಸಿದ್ದರಾಮಯ್ಯ

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲ: ಅಸಲು ಕಟ್ಟಿದರೆ ಬಡ್ಡಿ ಮನ್ನಾ- ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದಲ್ಲಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.


ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲನ್ನು ಅವಧಿಯೊಳಗೆ ಪಾವತಿಸಿದರೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.


ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ನಡೆದ ಚರ್ಚೆಗೆ ಸಂಬಂಧಿಸಿ ಉತ್ತರ ನೀಡಿದ ಅವರು, ಸಾಲದ ಮೇಲಿನ ಬಡ್ಡಿಮನ್ನಾ ಮಾಡುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ. ಆದರೆ, 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಯಾದ ಬಳಿಕವೂ ಮನ್ನಾ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Exit mobile version